ನವದೆಹಲಿ: ಅಜಿಂಕ್ಯ ರಹಾನೆ ನೇತೃತ್ವದಲ್ಲಿ ಟೀಂ ಇಂಡಿಯಾ ನಾಲ್ಕನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು 3 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಐತಿಹಾಸಿಕ ಜಯ ದಾಖಲಿಸಿತು. ಇದರ ಬೆನ್ನಲ್ಲೇ ಪ್ರಕಟವಾದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಪಡೆದುಕೊಂಡಿದೆ.
ಹೌದು. ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಅಗ್ರ ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಗೆಲುವು ಭಾರತಕ್ಕೆ 430 ಪಾಯಿಂಟ್ಸ್‌ಗಳನ್ನು ನೀಡಿದೆ. ದ್ವಿತೀಯ ಸ್ಥಾನದಲ್ಲಿ ನ್ಯೂಜಿಲೆಂಡ್ (420 ಪಾಯಿಂಟ್ಸ್) ಮತ್ತು ತೃತೀಯ ಸ್ಥಾನದಲ್ಲಿ ಆಸ್ಟ್ರೇಲಿಯಾ (332 ಪಾಯಿಂಟ್ಸ್) ತಂಡಗಳಿವೆ.
ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ತಂಡ ಈವರಗೆ (ಅಂದರೆ 2019ರಿಂದ) 5 ಟೆಸ್ಟ್ ಸರಣಿಗಳನ್ನಾಡಿದೆ. ಇದರಲ್ಲಿ 9 ಪಂದ್ಯಗಳನ್ನು ಗೆದ್ದಿದೆ, 3ರಲ್ಲಿ ಸೋತಿದೆ, 1 ಪಂದ್ಯ ಡ್ರಾ ಮಾಡಿಕೊಂಡಿದೆ. ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ದ್ವಿತೀಯ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದೆ.
PublicNext
20/01/2021 07:48 am