ನವದೆಹಲಿ : ಹಿಂದೂಗಳ ಬಹು ದಿನಗಳ ಕನಸಾಗಿದ್ದ, ಅಯೋಧ್ಯೆಯಲ್ಲಿ ರಾಮಮಂದಿರ ಕನಸು ಸಾಕಾರ ರೂಪ ಸಿಗುವ ಸಮಯ ಬಂದಿದೆ.
ಮಂದಿರ ನಿರ್ಮಾಣಕ್ಕೆ ದೇಶದಾದ್ಯಂತ ದೇಣಿಗೆ ಸಂಗ್ರಹಿಸಲಾಗುತ್ತಿದ್ದು ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ದೆಹಲಿಯಲ್ಲಿ 3 ದಿನಗಳಿಂದಲೂ ದೇಣಿಗೆ ಸಂಗ್ರಹಿಸಲಾಗುತ್ತಿದ್ದು ಇದುವರೆಗೂ 100 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ದೇಶದೆಲ್ಲೆಡೆ ನಿಧಿ ಸಂಗ್ರಹ ಅಭಿಯಾನ ಆರಂಭವಾಗಿದ್ದು ಎಲ್ಲೆಡೆಯೂ ಉತ್ತಮ ಪ್ರತಿಕ್ರಿಯೆಗಳು ಬರುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಗಂಭೀರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ 5 ಲಕ್ಷ ದೇಣಿಗೆ ನೀಡಿದ್ದರೆ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ಸಿಂಗ್ 1 ಲಕ್ಷ ನೀಡಿದ್ದಾರೆ.
PublicNext
22/01/2021 04:00 pm