ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೀಂ ಇಂಡಿಯಾದ ಆರು ಯುವ ಆಟಗಾರರಿಗೆ ಗಿಫ್ಟ್‌ ಕೊಟ್ಟ ಆನಂದ್ ಮಹೀಂದ್ರಾ

ನವದೆಹಲಿ: ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಟೀಂ ಇಂಡಿಯಾದ ಆರು ಯುವ ಆಟಗಾರರಿಗೆ ವಿಶೇಷ ಗಿಫ್ಟ್‌ ನೀಡುವ ಭರವಸೆ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಐತಿಹಾಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆನಂದ್ ಮಹೀಂದ್ರಾ ಅವರು ಟೀಂ ಇಂಡಿಯಾ ಆಟಗಾರರಾದ ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್, ಟಿ.ನಟರಾಜನ್, ವಾಷಿಂಗ್ಟನ್ ಸುಂದರ್ ಮತ್ತು ಶುಭ್‌ಮನ್ ಗಿಲ್ ಅವರಿಗೆ ಎಸ್‌ಯುವಿ ಕಾರುಗಳನ್ನು ಉಡುಗೊರೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ.

ಈ ವಿಚಾರವನ್ನು ಉದ್ಯಮಿ ಆನಂದ್ ಮಹೀಂದ್ರಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಅವರ ಈ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Edited By : Vijay Kumar
PublicNext

PublicNext

23/01/2021 03:15 pm

Cinque Terre

68.68 K

Cinque Terre

7

ಸಂಬಂಧಿತ ಸುದ್ದಿ