ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಭಾನುವಾರ ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ತೆರಳಿದ್ದಾರೆ.
ಸೌರವ್ ಗಂಗೂಲಿ ಅವರಿಗೆ ಬುಧವಾರ ಮತ್ತೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಗುರುವಾರ ಯಶಸ್ವಿಯಾಗಿ ಆ್ಯಂಜಿಯೊಪ್ಲಾಸ್ಟಿ ನಡೆಸಿರುವ ವೈದ್ಯರು, ಮತ್ತೆರಡು ಸ್ಟಂಟ್ ಆಳವಡಿಸಿದ್ದಾರೆ. ಈ ವೈದ್ಯರ ತಂಡದಲ್ಲಿ ಹೃದ್ರೋಗ ತಜ್ಞೆ ಡಾ.ದೇವಿ ಶೆಟ್ಟಿ ಮತ್ತು ಡಾ.ಅಶ್ವಿನ್ ಮೆಹ್ತಾ ಅವರು ಕೂಡ ಇದ್ದರು.
PublicNext
31/01/2021 01:31 pm