ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಪ್ರತಿಭಟನೆ ಬಗ್ಗೆ 'ವಿರಾಟ್‌' ಮೊದಲ ಪ್ರತಿಕ್ರಿಯೆ

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, ''ಭಿನ್ನಭಿಪ್ರಾಯಗಳ ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಇರೋಣ. ರೈತರು ನಮ್ಮ ದೇಶದ ಅವಿಭಾಜ್ಯ ಅಂಗ. ಶಾಂತಿ ನೆಲೆಸಲು ಹಾಗೂ ಒಗ್ಗಟ್ಟಾಗಿ ಎಲ್ಲರೂ ಮುಂದುವರಿಯಲು ಎಲ್ಲ ಪಕ್ಷಗಳ ನಡುವೆ ಸೌಹಾರ್ದಯುತ ಪರಿಹಾರ ಸಿಗಲಿದೆ ಎಂಬುದರಲ್ಲಿ ನನಗೆ ಖಾತ್ರಿಯಿದೆ'' ಎಂದು ತಿಳಿಸಿದ್ದಾರೆ.

ಟೀಂ ಇಂಡಿಯಾ ಅನುಭವಿ ಆಟಗಾರ ರಹಾನೆ ಟ್ವೀಟ್ ಮಾಡಿ, ''ನಾವು ಒಂದಾಗಿ ನಿಂತರೆ ಪರಿಹರಿಸಲಾಗದ ಯಾವುದೇ ಸಮಸ್ಯೆ ಇಲ್ಲ. ನಾವು ಒಂದಾಗಿ ಇರೋಣ ಮತ್ತು ಆಂತರಿಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸೋಣ'' ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

04/02/2021 08:22 am

Cinque Terre

63.88 K

Cinque Terre

9

ಸಂಬಂಧಿತ ಸುದ್ದಿ