ತಿರುವನಂತಪುರಂ: ಟೀಂ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ವಿರುದ್ಧ ಕೇರಳದ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ತೆಂಡೂಲ್ಕರ್ ಅವರ ಕಟೌಟ್‌ಗೆ ಕಪ್ಪು ಆಯಿಲ್ ಎರಚಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರ ಟ್ವೀಟ್ಗೆ ಪ್ರತಿಯಾಗಿ ಈ ಕೆಲಸ ಮಾಡಿರುವುದಾಗಿ ಕೇರಳ ಕಾಂಗ್ರೆಸ್ ಮುಖಂಡರು ಹೇಳಿಕೊಂಡಿದ್ದಾರೆ. ಭಾರತದ ಕ್ರಿಕೆಟ್ ದಂತಕತೆ ಸಚಿನ್ ಅವರ ಕಟೌಟ್‌ಗೆ ಮಸಿ ಹಾಕಿರುವುದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.
ಆಗಿದ್ದೇನು?: ಅಮೆರಿಕದ ಖ್ಯಾತ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ ಸೇರಿದಂತೆ ಅನೇಕ ವಿದೇಶಿಗರು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿದ್ದರು. ಇದೇ ವಿಚಾರವಾಗಿ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದ ಸಚಿನ್ ಅವರು, ''ಭಾರತದ ಸಾರ್ವಭೌಮತ್ವವನ್ನು ರಾಜಿ ಮಾಡಲಾಗುವುದಿಲ್ಲ. ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದು ಆದರೆ ಭಾಗವಹಿಸುವವರಲ್ಲ. ಭಾರತೀಯರಿಗೆ ಭಾರತ ತಿಳಿದಿದೆ ಮತ್ತು ಭಾರತಕ್ಕಾಗಿ ಏನು ಬೇಕೆನ್ನುವುದನ್ನು ನಿರ್ಧರಿಸಬೇಕಿದೆ. ನಾವೆಲ್ಲರೂ ಒಂದು ರಾಷ್ಟ್ರವಾಗಿ ಐಕ್ಯವಾಗಿ ಉಳಿಯೋಣ''. ಎಂದು ತಿಳಿಸಿದ್ದರು.
PublicNext
06/02/2021 03:50 pm