ಚೆನ್ನೈ: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ವೇಳೆ ಟೀಂ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಅವರು ಭಾರತದ ಮಾಜಿ ಸ್ಪಿನ್ ಬೌಲರ್ ಹರ್ಭಜನ್ ರೀತಿ ಬೌಲಿಂಗ್ ಮಾಡಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಈ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲೇ ಇಂಗ್ಲೆಂಡ್ ತಂಡವು ೫೫೫ ರನ್ ಚಚ್ಚಿದೆ. ನಾಯಕ ಜೋ ರೂಟ್ 218 ರನ್, ಬೆನ್ ಸ್ಟೋಕ್ಸ್ 82 ರನ್‌ಗಳ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಬೃಹತ್ ಮೊತ್ತ ಪೇರಿಸಿದೆ. 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 8 ವಿಕೆಟ್ ನಷ್ಟಕ್ಕೆ 555 ರನ್ ಗಳಿಸಿದೆ. ಈ ಮೂಲಕ ಮೂರನೇ ದಿನವೂ ಬ್ಯಾಟಿಂಗ್ ಮಾಡಲಿದೆ.
PublicNext
06/02/2021 09:35 pm