ಚೆನ್ನೈ: ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಸಿರಾಜ್ ಯುವ ಸ್ಪಿನ್ನರ್ ಕುಲದೀಪ್ ಯಾದವ್ ಅವರ ಕುತ್ತಿಗೆ ಹಿಡಿದೆಳೆದಿದ್ದಾರೆ. ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ.
ಭಾರತೀಯ ಡ್ರೆಸ್ಸಿಂಗ್ ಕೋಣೆಯಲ್ಲಿನ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಸ್ಪಿನ್ನರ್ ಸ್ಪಿನ್ನರ್ ಕುಲದೀಪ್ ಯಾದವ್ ಅವರ ಕತ್ತಿನ ಹಿಂಭಾಗವನ್ನು ಕೋಪದಿಂದ ಹಿಡಿದೆಳೆದಿರುವುದು ಕಂಡುಬಂದಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ 2 ನೇ ದಿನದಾಟದ ಅಂತ್ಯದ ನಂತರ ಈ ಘಟನೆ ನಡೆದಿದೆ. ಈ ವಿಡಿಯೋ ತುಣುಕಿನಲ್ಲಿ ಸಿರಾಜ್ ಕುಲದೀಪ್ ರನ್ನು ಆಕ್ರಮಣಕಾರಿಯಾಗಿ ಹಿಡಿದೆಳೆಯುತ್ತಾರೆ. ಅಲ್ಲಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಕ್ಯಾಮೆರಾ ಮುಖ್ಯ ಕೋಚ್ ರವಿಶಾಸ್ತ್ರಿ ಕಡೆಗೆ ವಾಲುವುದರಿಂದ ಮುಂದೇನಾಯ್ತು ಎಂಬ ಬಗ್ಗೆ ಮಾಹಿತಿ ಇಲ್ಲ.
PublicNext
07/02/2021 10:17 pm