ಬೆಂಗಳೂರು: ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಚೊಚ್ಚಲ ಚಾಂಪಿಯನ್‌ಶಿಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಆರ್‌ಸಿಬಿ ಸಿಬ್ಬಂದಿ ಬಣದಲ್ಲಿ ಬದಲಾವಣೆ ಮಾಡಿಕೊಂಡಿದೆ.
ಆರ್‌ಸಿಬಿ ತನ್ನ ಬ್ಯಾಟಿಂಗ್ ಸಲಹೆಗಾರರಾಗಿ ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರನ್ನು ಆಯ್ಕೆ ಮಾಡಿದೆ. ಈ ವಿಚಾರವನ್ನು ಆರ್‌ಸಿಬಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. 'ಬ್ಯಾಟಿಂಗ್ ಸಲಹೆಗಾರರಾಗಿ ಸಂಜಯ್ ಬಂಗಾರ್ ಅವರನ್ನು ಆರ್‌ಸಿಬಿ ಕುಟುಂಬಕ್ಕೆ ಬರ ಮಾಡಿಕೊಳ್ಳಲು ನಮಗೆ ಸಂತಸವಾಗುತ್ತಿದೆ' ಎಂದು ತಿಳಿಸಿದೆ.
ಕಳೆದ ಸೀಸನ್ ನಲ್ಲಿ ಆರ್‌ಸಿಬಿ ಪ್ಲೇಆಫ್‌ಗೆ ಪ್ರವೇಶಿಸಿತ್ತಾದರೂ ಫೈನಲ್‌ಗೆ ಅರ್ಹತೆ ಗಿಟ್ಟಿಸುವಲ್ಲಿ ವಿಫಲವಾಗಿತ್ತು. ನಾಲ್ಕನೇ ಸ್ಥಾನದಲ್ಲಿ ಟೂರ್ನಿ ಮುಗಿಸಿತ್ತು. ಒಂದು ಬಾರಿಯೂ ಕಪ್ ಗೆಲ್ಲದ ತಂಡಗಳಲ್ಲಿ ಆರ್‌ಸಿಬಿ ಕೂಡ ಸೇರಿದೆ. ಇನ್ನುಳಿದ ಎರಡು ತಂಡಗಳೆಂದರೆ ಕಿಂಗ್ಸ್ ಘಿI ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್.
PublicNext
10/02/2021 03:59 pm