ಚೆನ್ನೈ: ಚೆನ್ನೈಯ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ಪ್ರವಾಸಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಬಳಗ ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ಪರ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅರ್ಧ ಶತಕ ಬಾರಿಸಿದ್ದಾರೆ.
ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಸ್ಪಿನ್ನರ್ ಅಕ್ಸರ್ ಪಟೇಲ್, ವೇಗಿ ಮೊಹಮ್ಮದ್ ಸಿರಾಜ್, ಸ್ಪಿನ್ನರ್ ಕುಲದೀಪ್ ಯಾದವ್ ಪ್ಲೇಯಿಂಗ್ XIನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ವಾಷಿಂಗ್ಟನ್ ಸುಂದರ್, ಶಹಬಾಝ್ ನದೀಮ್, ಜಸ್‌ಪ್ರೀತ್ ಬೂಮ್ರಾ ಬೆಂಚ್‌ನಲ್ಲಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಸ್ಟುವರ್ಟ್ ಬ್ರಾಡ್ ಆಡುತ್ತಿದ್ದಾರೆ.
PublicNext
13/02/2021 12:03 pm