ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾಖಲೆಗಳ ಮೇಲೆ ದಾಖಲೆ ಬರೆದ ಅಶ್ವಿನ್

ಚೆನ್ನೈ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತದ ಪ್ರಮುಖ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಹೊಸ ದಾಖಲೆ ಬರೆದಿದ್ದಾರೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್ ಪಟ್ಟಿಯಲ್ಲಿ ಬಾಥಮ್ ಅವರ 383 ವಿಕೆಟ್ ದಾಟಿ ಅಶ್ವಿನ್ ಮುಂದಕ್ಕೆ ಸಾಗಿದ್ದರು. 2ನೇ ಟೆಸ್ಟ್ ಪಂದ್ಯದಲ್ಲಿ ಹರ್ಭಜನ್ ಸಿಂಗ್ ದಾಖಲೆ ಮುರಿದಿದ್ದಾರೆ. ತವರಿನಲ್ಲಿ 265 ವಿಕೆಟ್ ಕಬಳಿಸಿದ್ದ ಹರ್ಭಜನ್ ಸಿಂಗ್ ಸಾಧನೆಯನ್ನು ಅಶ್ವಿನ್ ಹಿಂದಿಕ್ಕಿದ್ದಾರೆ.

34ವರ್ಷ ವಯಸ್ಸಿನ ಅಶ್ವಿನ್ ಅವರು ಸ್ಟುವರ್ಟ್ ಬ್ರಾಡ್ ವಿಕೆಟ್ ಪಡೆಯುತ್ತಿದ್ದಂತೆ, ಟೆಸ್ಟ್ ಕ್ರಿಕೆಟ್‌ನಲ್ಲಿ 200 ಎಡಗೈ ಬ್ಯಾಟ್ಸ್‌ಮನ್ ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡರು. ಅಶ್ವಿನ್ ಅವರ ಟೆಸ್ಟ್ ವೃತ್ತಿ ಬದುಕಿನ ಮೊದಲ ವಿಕೆಟ್ ಕೂಡ ಎಡಗೈ ಬ್ಯಾಟ್ಸ್‌ಮನ್ ರದ್ದು ಎಂಬುದು ವಿಶೇಷ.

Edited By : Vijay Kumar
PublicNext

PublicNext

14/02/2021 07:15 pm

Cinque Terre

47.56 K

Cinque Terre

0

ಸಂಬಂಧಿತ ಸುದ್ದಿ