ಚೆನ್ನೈ: ಟೀಂ ಇಂಡಿಯಾ ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮೈದಾನದಲ್ಲೇ ಆಗಾಗ ಸಹ ಆಟಗಾರ, ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾಲೆಳೆಯುತ್ತಲೇ ಇರುತ್ತಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರು ಪಂತ್ ತಲೆಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಂಗ್ಲೆಂಡ್‌ನ ಮೊದಲ ಇನ್ನಿಂಗ್ಸ್‌ನ 49 ಓವರ್‌ನ ಎರಡನೇ ಎಸೆತದಲ್ಲಿ ಬೆನ್ ಸ್ಟೋಕ್ಸ್ ಅವರು ಆರ್.ಅಶ್ವಿನ್ ಅವರಿಗೆ ವಿಕೆಟ್ ಒಪ್ಪಿಸಿದರು. ಈ ಸಂಭ್ರಮಾಚರಣೆ ವೇಳೆ ರೋಹಿತ್ ಶರ್ಮಾ ತಮಾಷೆಯಾಗಿ ಪಂತ್ ತಲೆಗೆ ಹೊಡೆದಿದ್ದಾರೆ. ಈ ವಿಡಿಯೋವನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ವಿರೇಂದ್ರ ಸೆಹ್ವಾಗ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.
PublicNext
15/02/2021 04:46 pm