ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದಾರ್ಪಣೆ ಪಂದ್ಯದಲ್ಲೇ 'ಅಕ್ಷರ್' ಕಮಾಲ್

ಚೆನ್ನೈ: ಪದಾರ್ಪಣೆ ಪಂದ್ಯದಲ್ಲೇ ಟೀಂ ಇಂಡಿಯಾ ಆಲ್‌ರೌಂಡರ್ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಕಮಾಲ್ ಮಾಡಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅಕ್ಷರ್ ಪಟೇಲ್ ಐದು ವಿಕೆಟ್‌ಗಳ ಗೊಂಚಲು ಪಡೆದು ಶ್ರೇಷ್ಠ ಸಾಧನೆ ಮಾಡಿದ್ದಾರೆ. ಈ ಮೂಲಕ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಐದು ವಿಕೆಟ್‌ಗಳ ಗೊಂಚಲು ಪಡೆದ 9ನೇ ಭಾರತೀಯ ಬೌಲರ್ ಎನಿಸಿದ್ದಾರೆ. ಒಟ್ಟಾರೆ ಎರಡು ಇನ್ನಿಂಗ್ಸ್‌ಗಳಲ್ಲಿ ಅಕ್ಷರ್ ಪಟೇಲ್ 7 ವಿಕೆಟ್ ಪಡೆದು ಸೈ ಎನಿಸಿಕೊಂಡಿದ್ದಾರೆ.

ಪದಾರ್ಪಣೆ ಪಂದ್ಯದಲ್ಲಿ ಟೀಂ ಇಂಡಿಯಾ ಪರ 1932ರಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ನಿಸ್ಸಾರ್ ಚೊಚ್ಚಲ ಪಂದ್ಯದಲ್ಲಿ 5 ವಿಕೆಟ್‌ ಪಡೆದಿದ್ದರು. ಬಳಿಕ ವಾಮನ್ ಕುಮಾರ್ 1962 ರಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಡೆಲ್ಲಿ ಫಿರೋಜ್ ಶಾ ಕೋಟ್ಲ ಅಂಗಳದಲ್ಲಿ ಚೊಚ್ಚಲ ಪಂದ್ಯದಲ್ಲಿ 5 ವಿಕೆಟ್ ಕಿತ್ತಿದ್ದರು. ಬಳಿಕ ಸಯ್ಯದ್ ಅಬಿದ್ ಅಲಿ, ದಿಲೀಪ್ ದೋಷಿ, ನರೇಂದ್ರ ಹಿರ್ವಾನಿ, ಅಮಿತ್ ಮಿಶ್ರಾ, ರವಿಚಂದ್ರನ್ ಅಶ್ವಿನ್ ಹಾಗೂ ಮೊಹಮ್ಮದ್ ಶಮಿ ತಮ್ಮ ಚೊಚ್ಚಲ ಪಂದ್ಯದಲ್ಲಿ 5 ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದ್ದರು.

Edited By : Vijay Kumar
PublicNext

PublicNext

16/02/2021 02:32 pm

Cinque Terre

48.25 K

Cinque Terre

0

ಸಂಬಂಧಿತ ಸುದ್ದಿ