ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯ್ ಹಜಾರೆ ಟ್ರೋಫಿ: ಬಿಹಾರದ ಕ್ರಿಕೆಟರ್‌ಗೆ ಕೊರೊನಾ ದೃಢ

ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಬಿಹಾರದ ಆಟಗಾರರೊಬ್ಬರಿಗೆ ಕೋವಿಡ್-19 ಸೋಂಕು ಇರುವುದು ಪತ್ತೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್‌ನ ಅಧಿಕಾರಿಯೊಬ್ಬರು, ''ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ. ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ'' ಎಂದು ತಿಳಿಸಿದ್ದಾರೆ.

ಫೆ.22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್‌ಗಳ ಭರ್ಜರಿ ಗೆಲುವು ಕಂಡಿತ್ತು. ಇದೇ ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.

Edited By : Vijay Kumar
PublicNext

PublicNext

23/02/2021 04:16 pm

Cinque Terre

45.55 K

Cinque Terre

0

ಸಂಬಂಧಿತ ಸುದ್ದಿ