ಗಾಂಧಿನಗರ: ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹ್ಮದಾಬಾದ್‌ನ ಮೊಟೇರಾ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.
ಈ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಈ ಮೂಲಕ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಮೊಟೇರಾ ಸ್ಟೇಡಿಯಂನಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯ ಜರುಗಲಿದೆ. ಈ ಕ್ರೀಡಾಂಗಣ 63 ಎಕರೆ ಪ್ರದೇಶದಲ್ಲಿದ್ದು, 1.1 ಲಕ್ಷ ಆಸನ ಸಾಮರ್ಥ್ಯ ಹೊಂದಿದೆ. ಈ ವರೆಗೂ ಆಸ್ಪ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನ (ಎಂಸಿಜಿ) 90,000 ಸಾಮರ್ಥ್ಯದೊಂದಿಗೆ ಅತಿದೊಡ್ಡ ಕ್ರೀಡಾಂಗಣ ಎನ್ನುವ ಖ್ಯಾತಿ ಪಡೆದಿತ್ತು.
ಬರೋಬ್ಬರಿ 7 ವರ್ಷಗಳ ಬಳಿಕ ಅಹಮದಾಬಾದ್‌ನ ಮೊಟೇರಾ ಸ್ಟೇಡಿಯಂನಲ್ಲಿ ಇಂದು (ಫೆ. 24)ರಂದು ಮೊದಲ ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ. ಈ ಮೊದಲು 2014ರಲ್ಲಿ ಭಾರತ ತಂಡ ಕೊನೆಯ ಬಾರಿಗೆ ಇಲ್ಲಿ ಅಂತಾರಾಷ್ಟ್ರೀಯ ಪಂದ್ಯವನ್ನಾಡಿತ್ತು. ಶ್ರೀಲಂಕಾ ವಿರುದ್ಧದ ಈ ಏಕದಿನ ಪಂದ್ಯದಲ್ಲಿ ಅಂಬಟಿ ರಾಯುಡು ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು.
PublicNext
24/02/2021 11:50 am