ಅಹ್ಮದಾಬಾದ್: ವಿಶ್ವದ ಅತದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ಮೊಟೇರಾ ಸ್ಟೇಡಿಯಂ (ಸರ್ದಾರ್ ಪಟೇಲ್ ಸ್ಟೇಡಿಯಂ) ಹೆಸರನ್ನು ಬದಲಿಸಲಾಗಿದೆ.
ಮೊಟೇರಾ ಸ್ಟೇಡಿಯಂ ಅನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಉದ್ಘಾಟನೆ ಮಾಡಿದರು. ಈ ಹಿಂದೆ ಈ ಸ್ಟೇಡಿಯಂಗೆ ಸರ್ದಾರ್ ಪಟೇಲ್ ಹೆಸರಿದ್ದು, ಸದ್ಯ ''ನರೇಂದ್ರ ಮೋದಿ'' ಹೆಸರಿನೊಂದಿಗೆ ಮರು ನಾಮಕರಣ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಕ್ರೀಡಾ ಸಚಿವ ಕಿರಣ್ ರಿಜಿಜು ಹಾಗೂ ಇನ್ನಿತರ ಪ್ರಮುಖ ವ್ಯಕ್ತಿಗಳು ಉಪಸ್ಥಿತರಿದ್ದರು.
PublicNext
24/02/2021 02:07 pm