ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದ ಮುನ್ನಡೆಯನ್ನು ಸಾಧಿಸಿದೆ.
ಭಾರತ ಈ ಪಂದ್ಯದಲ್ಲಿ ಕೇವಲ ಎರಡನೇ ದಿನದಲ್ಲಿ ತನ್ನ ಪರವಾಗಿ ಫಲಿತಾಂಶವನ್ನು ಪಡೆದುಕೊಂಡಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ 49 ರನ್‌ಗಳ ಗುರಿಯನ್ನು ಪಡೆದುಕೊಂಡಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ ಆರಂಭಿಕ ಜೋಡಿ ಸುಲಭವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಭಾರತ ಯಾವುದೇ ವಿಕೆಟ್ ಕಳೆದುಕೊಳ್ಳದೆ 10 ವಿಕೆಟ್‌ಗಳ ಅಂತರದ ಬೃಹತ್ ಗೆಲುವನ್ನು ತನ್ನದಾಗಿಸಿಕೊಂಡಿದೆ.
PublicNext
25/02/2021 08:39 pm