ಭಾರತ ಕ್ರಿಕೆಟ್‌ನ ಸ್ಪೋಟಕ ಬ್ಯಾಟ್ಸ್‌ಮನ್ ಹಾಗೂ ಆಲ್‌ರೌಂಡರ್ ಆಗಿದ್ದ ಯೂಸೂಫ್ ಪಠಾಣ್ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಮೂಲಕ ಒಂದೇ ದಿನ ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದಂತಾಗಿದೆ.
ಇದಕ್ಕೂ ಕೆಲವೇ ಕ್ಷಣಗಳ ಮೊದಲ ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿಯ ವಿನಯ್ ಕುಮಾರ್ ನಿವೃತ್ತಿ ಘೋಷಿಸಿದ್ದರು. ಆಲ್‌ರೌಂಡರ್ ಯೂಸುಫ್ ಪಠಾಣ್ ಟ್ವಿಟ್ಟರ್‌ನಲ್ಲಿ ತಮ್ಮ ನಿವೃತ್ತಿಯ ವಿಚಾರವನ್ನು ಬಹಿರಂಗಪಡಿಸಿದ್ದು, ವೃತ್ತಿ ಬದುಕಿನಲ್ಲಿ ಸಹಕರಿಸಿದ ಎಲ್ಲರನ್ನೂ ಸ್ಮರಿಸಿದ್ದಾರೆ. ಜೊತೆಗೆ ಯೂಸೂಫ್ ಪಠಾಣ್ ಸುಧೀರ್ಘ ಪತ್ರವನ್ನು ಹಂಚಿಕೊಂಡಿದ್ದಾರೆ. 'ಎರಡು ವಿಶ್ವಕಪ್ ಗೆದ್ದುಕೊಂಡಿದ್ದು ಹಾಗೂ ಸಚಿನ್ ತೆಂಡೂಲ್ಕರ್ ಅವರನ್ನು ಹೆಗಲಲ್ಲಿ ಹೊತ್ತು ನಡೆದಿದ್ದು ನನ್ನ ವೃತ್ತಿ ಬದುಕಿನ ಕೆಲ ಅತ್ಯಂತ ಸ್ಮರಣೀಯ ಕ್ಷಣಗಳು' ಎಂದು ಯೂಸುಫ್ ಪಠಾಣ್ ಈ ಪತ್ರದಲ್ಲಿ ಬರೆದುಕೊಂಡಿದ್ದಾರೆ.
PublicNext
26/02/2021 06:05 pm