ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂದು ನಾಟೆಕರ್ ಇನ್ನು ನೆನಪು ಮಾತ್ರ

ಪುಣೆ : ವಿದೇಶದಲ್ಲಿ ಬ್ಯಾಡ್ಮಿಂಟನ್ ಟೂರ್ನಿ ಜಯಿಸಿದ ಮೊದಲ ಭಾರತೀಯ ಶಟ್ಲರ್ ಎನ್ನುವ ದಾಖಲೆ ನಿರ್ಮಿಸಿದ್ದ ಭಾರತದ ಬ್ಯಾಡ್ಮಿಂಟನ್ ದಂತಕತೆ ನಂದು ನಾಟೆಕರ್(88) ಪುಣೆಯಲ್ಲಿಂದು ಬುಧವಾರ(ಜು.28) ಕೊನೆಯುಸಿರೆಳೆದಿದ್ದಾರೆ. ನಾಟೆಕರ್ 1956ರಲ್ಲಿ ಮಲೇಷ್ಯಾದಲ್ಲಿ ನಡೆದ ಸೆಲ್ಲಂಗರ್ ಇಂಟರ್ ನ್ಯಾಷನಲ್ ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಇತಿಹಾಸ ನಿರ್ಮಿಸಿದ್ದರು. 1954ರಲ್ಲಿ ನಡೆದ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ನಂದು ನಾಟೆಕರ್ ಕ್ವಾರ್ಟರ್ ಫೈನಲ್ ಹಂತ ಪ್ರವೇಶಿದ್ದರು. ಇದಾದ ಬಳಿಕ 1980 ಮತ್ತು 1981ರಲ್ಲಿ ಡಬಲ್ಸ್ ವಿಭಾಗದಲ್ಲಿ ಜಯಭೇರಿ ಬಾರಿಸಿದ್ದರು.

ಇನ್ನು ಅರ್ಜುನ ಪ್ರಶಸ್ತಿ ಪಡೆದ ಮೊದಲ ಕ್ರೀಡಾಪಟು ಎನ್ನುವ ಹೆಗ್ಗಳಿಕೆಯು ನಂದು ಅವರದ್ದು. 1961ರಲ್ಲಿ ನಂದು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. ಇನ್ನು 1965ರಲ್ಲಿ ಜಮೈಕಾದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ನಂದು ನಾಟೆಕರ್ ಭಾರತವನ್ನು ಪ್ರತಿನಿಧಿಸಿದ್ದರು. ನಂದು ನಾಟೆಕರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ದಿಗ್ಗಜರು ಸಾಮಾಜಿಕ ಜಾಲತಾಣಗಳಲ್ಲಿ ಕಂಬನಿ ಮಿಡಿದಿದ್ದಾರೆ.

Edited By : Nirmala Aralikatti
PublicNext

PublicNext

28/07/2021 03:12 pm

Cinque Terre

23.95 K

Cinque Terre

0

ಸಂಬಂಧಿತ ಸುದ್ದಿ