ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿನ್ನದ ಕನಸು ಭಗ್ನ : ಸೆಮಿಫೈನಲ್ ನಲ್ಲಿ ಮುಗ್ಗರಿಸಿದ ಸಿಂಧು

ಟೋಕಿಯೊ : ಭಾರತದ ಸ್ಟಾರ್ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು, ರಿಯೋ ಒಲಿಂಪಿಕ್ಸ್ -2016 ರ ಪದಕ ವಿಜೇತೆ, ಟೋಕಿಯೊ ಒಲಿಂಪಿಕ್ಸ್ -2020 ರಲ್ಲಿ ಶನಿವಾರ ಸೆಮಿ ಫೈನಲ್ ಪಂದ್ಯದಲ್ಲಿ ಸೋತು ಚಿನ್ನ ಗೆಲುವ ಕನಸಿಗೆ ತಣ್ಣೀರೆರಚಿದ್ದಾರೆ.

ಮಹಿಳಾ ಸಿಂಗಲ್ಸ್ ವಿಭಾಗದ ಎರಡನೇ ಸೆಮಿಫೈನಲ್ ನಲ್ಲಿ ಪ್ರತಿಸ್ಪರ್ಧಿ ಚೈನೀಸ್ ಥೈವಾನ್ ನ ತೈ ಜು ಯಿಂಗ್ ಅವರ ವಿರುದ್ಧ ಸೋಲನುಭವಿಸಿದರು. ಥೈವಾನ್ ನ ತೈ ಜು ಯಿಂಗ್ ವಿರುದ್ಧ 21-18, 21-12ರ ಅಂತರದಲ್ಲಿ ಸೋಲು ಅನುಭವಿಸಿದರು.

ಇದರೊಂದಿಗೆ ಫೈನಲ್ ರೇಸ್ ನಿಂದ ಹೊರಬಿದ್ದಿದ್ದಾರೆ. 2016ರ ರಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಸಿಂಧು, ಈಗ ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ. ಏತನ್ಮಧ್ಯೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧು ಸತತ ಎರಡು ಒಲಿಂಪಿಕ್ಸ್ ಗಳಲ್ಲಿ ಸೆಮಿಫೈನಲ್ ಹಂತಕ್ಕೆ ಪ್ರವೇಶಿಸಿದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ್ತಿಯಾದರು.

Edited By : Nirmala Aralikatti
PublicNext

PublicNext

31/07/2021 05:17 pm

Cinque Terre

79.98 K

Cinque Terre

1