ಬೆಂಗಳೂರು : ಚಿಯರ್ ಫಾರ್ ಇಂಡಿಯಾ ಧ್ಯೇಯವಾಕ್ಯದಡಿ ಒಲಂಪಿಕ್ಸ್ ನಲ್ಲಿ ಭಾಗವಸಿದ ದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಮಾಡಲು ಬಿಜೆಪಿ ಯುವ ಮೋರ್ಚಾದಿಂದ ಆಯೋಜನೆ ಮಾಡಲಾಗಿದ್ದ ಸೈಕಲ್ ರ‍್ಯಾಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಭಾಗವಹಿಸಿದರು.
ಮುಖ್ಯಮಂತ್ರಿಯಾದ ಬಳಿಕ ಮೊದಲ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಸವರಾಜ ಬೊಮ್ಮಾಯಿಯವರು ವಿಧಾನಸೌಧ ಮುಂಭಾಗದ ಅಂಬೇಡ್ಕರ್ ಬೀದಿಯಿಂದ ರ‍್ಯಾಲಿಗೆ ಚಾಲನೆ ನೀಡಲಾಯಿತು. ಸಂಸದ ತೇಜಸ್ವಿ ಸೂರ್ಯ, ಮಾಜಿ ಸಚಿವ ಡಿ.ವಿ ಸದಾನಂದ ಗೌಡ ಹಾಗೂ ಮಾಜಿ ಸಚಿವ ಸುಧಾಕರ್ ಭಾಗಿಯಾಗಿದ್ದರು.
ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಮನುಷ್ಯ ಕೆಲವುಗಳನ್ನು ಬಹಳ ಸುಲಭವಾಗಿ ರೂಢಿಸಿಕೊಳ್ಳುತ್ತಾನೆ ಸೈಕಲ್ ನಿಂದ ನಮ್ಮ ದೇಹ ಆರಾಮದಾಯವಾಗಿರುತ್ತದೆ. ಒಲಂಪಿಕ್ಸ್ ನಲ್ಲಿ ಭಾಗವಹಿಸಿದವರಿಗೆ ಸ್ಪೂರ್ತಿ ಸಿಗಲೆಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.
PublicNext
01/08/2021 12:11 pm