ಟೋಕಿಯೋ: ಭಾರತೀಯ ಪುರುಷರ ತಂಡವು ಒಲಿಂಪಿಕ್ಸ್ ಹಾಕಿ ಕ್ವಾರ್ಟರ್‌ಫೈನಲ್‌ನಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸಿದೆ. ಈ ಮೂಲಕ 41 ವರ್ಷದ ಬಳಿಕ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಇಂದು ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ 3-1 ಗೋಲುಗಳ ಅಂತರದಿಂದ ಗೆದ್ದು ಸೆಮಿಫೈನಲ್ ಪ್ರವೇಶಿಸಿದೆ. ಈ ಮೂಲಕ ಈಗ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಪದಕ ಗೆಲ್ಲಲು ಮತ್ತಷ್ಟು ಹತ್ತಿರವಾಗಿದೆ.
1928-64ರ ಅವಧಿಯಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ 7 ಬಾರಿ ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು. ಈ ಅವಧಿಯಲ್ಲಿ 1960ರ ಫೈನಲ್ ಪಂದ್ಯದಲ್ಲಿ ಸೋಲು ಕಂಡು ಬೆಳ್ಳಿ ಪದಕವನ್ನು ಗಳಿಸಿದ್ದು ಹೊರತುಪಡಿಸಿ ಉಳಿದೆಲ್ಲಾ ಬಾರಿಯೂ ಚಿನ್ನವನ್ನು ಮುಡಿಗೇರಿಸಿಕೊಂಡಿತ್ತು. ಅದಾದ ಬಳಿಕ ಮತ್ತೆ 1980ರಲ್ಲಿ ಮಾಸ್ಕೋದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತ ಮತ್ತೆ ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು. ಆದರೆ ನಂತರ ಭಾರತೀಯ ಹಾಕಿ ತಂಡದ ಒಲಿಂಪಿಕ್ಸ್‌ನಲ್ಲಿ ಹೇಳಿಕೊಳ್ಳುವಂತಾ ಪ್ರದರ್ಶನ ನೀಡಲು ಸಂಪೂರ್ಣ ವಿಫಲವಾಗಿತ್ತು.
PublicNext
01/08/2021 08:29 pm