ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮೊದಲಿನಿಂದಲೂ ಸಾಧರಕನ್ನು ಸನ್ಮಾನಿಸುವ, ಗೌರವಿಸುವ ಕೆಲಸ ಮಾಡಿಕೊಂಡೇ ಬಂದಿದ್ದಾರೆ. ಸದ್ಯ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗಿಯಾದ ಅಥ್ಲೀಟ್ ಗಳ ಜತೆ ಆಗಸ್ಟ್ 15ರಂದು ಸಂವಾದ ನಡೆಸಲಿದ್ದಾರೆ. ಸ್ವಾತಂತ್ರ್ಯೋತ್ಸವದಂದು ಕೆಂಪುಕೋಟೆಗೆ ಒಲಿಂಪಿಕ್ಸ್ ತಂಡವನ್ನು ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಲಿದ್ದಾರೆ. ನಂತರ ತಮ್ಮ ಮನೆಗೂ ಆಹ್ವಾನಿಸಿದ್ದು, ಅಲ್ಲಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ. ಸೆಮಿಫೈನಲ್ ಪ್ರವೇಶಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ ಪುರುಷ ಮತ್ತು ಮಹಿಳಾ ಹಾಕಿ ತಂಡಗಳನ್ನು ಅಭಿನಂದಿಸಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಸೋಲು ಮತ್ತು ಗೆಲುವುಗಳೆಲ್ಲ ಸಾಮಾನ್ಯ. ನಮ್ಮ ಪುರುಷರ ಹಾಕಿ ತಂಡ ಒಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸುತ್ತೇನೆ. ನಮ್ಮ ಆಟಗಾರರ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
PublicNext
03/08/2021 06:01 pm