ಟೋಕಿಯೋ: ಭಾರತದ ಭರವಸೆಯ ಕುಸ್ತಿಪಟು ರವಿಕುಮಾರ್ ದಹಿಯಾ ಅವರು ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ.
ರವಿಕುಮಾರ್ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮಗದೊಂದು ಪದಕ ಖಾತ್ರಿಪಡಿಸಿದ್ದಾರೆ. ಇಂದು (ಬುಧವಾರ) ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲಿ ರವಿಕುಮಾರ್ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದರು. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲೇ ಪದಕ ಗೆಲ್ಲುತ್ತಿರುವ ಐದನೇ ಭಾರತೀಯ ಕುಸ್ತಿಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ದಿಗ್ಗಜರಾದ ಕೆ.ಡಿ ಜಾಧವ್, ಸುಶೀಲ್ ಕುಮಾರ್, ಯೋಗೇಶ್ವರ್ ದತ್ ಮತ್ತು ಸಾಕ್ಷಿ ಮಲಿಕ್ ಸಾಲಿಗೆ ಸದ್ಯ ರವಿಕುಮಾರ್ ದಹಿಯಾ ಸೇರಿದ್ದಾರೆ. ಅಷ್ಟೇ ಅಲ್ಲದೆ ಸುಶೀಲ್ ಕುಮಾರ್ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಎರಡನೇ ಕುಸ್ತಿಪಟು ಎಂಬ ಹಿರಿಮೆಗೂ ಭಾಜನರಾಗಿದ್ದಾರೆ.
PublicNext
04/08/2021 03:24 pm