ನಾಟಿಂಗ್ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ತಂಡಗಳು ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಿದ್ದು, ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಮಹತ್ವದ ಬದಲಾವಣೆಯೊಂದಿಗೆ ಕಣಕ್ಕೆ ಇಳಿದಿದೆ. ಇಂದಿನಿಂದ (ಆಗಸ್ಟ್ 4)ರಿಂದ ಸೆಪ್ಟೆಂಬರ್ 14ರವರೆಗೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಟೀಂ ಇಂಡಿಯಾದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಅನುಭವಿ ಸ್ಪಿನ್ನರ್ ಅಶ್ವಿನ್, ಅನುಭವಿ ವೇಗಿ ಇಶಾಂತ್ ಶರ್ಮಾರನ್ನ ತಂಡದಿಂದ ಕೈಬಿಡಲಾಗಿದೆ. ಯುವ ವೇಗಿಗಳಾದ ಶಾರ್ದೂಲ್ ಠಾಕೂರ್, ಮಹಮ್ಮದ್ ಸಿರಾಜ್ ಆಡುವ ಹನ್ನೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ ಏಕೈಕ ಸ್ಪಿನ್ನರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಕನ್ನಡಿಗ ಕೆ.ಎಲ್.ರಾಹುಲ್, ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
PublicNext
04/08/2021 04:27 pm