ನಾಟಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೇ ಟೀಂ ಇಂಡಿಯಾ ಬೌಲರ್‌ಗಳು ಮಿಂಚಿನ ದಾಳಿ ನಡೆಸಿದ್ದಾರೆ. ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿ ಇಂಗ್ಲೆಂಡ್ ಪಡೆ 65.4 ಓವರ್‌ಗಳಲ್ಲಿ ಕೇವಲ 183 ರನ್ ಗಳಿಸಿ ಸರ್ವಪತನ ಕಂಡಿದೆ.
ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರ ಜೋ ರೂಟ್ 64 ರನ್ ಗಳಿಸಿ ತಂಡಕ್ಕೆ ಆಸರೆಯಾದರೆ, ಜಾನಿ ಬೆಸ್ಟೊ 29 ರನ್, ಜಾಕ್ ಕ್ರಾಲಿ ಹಾಗೂ ಸ್ಯಾಮ್ ಕರನ್ ತಲಾ 27 ರನ್ ಗಳಿಸಲು ಶಕ್ತವಾದರು.
ಭಾರತದ ಜಸ್‌ಪ್ರೀತ್ ಬೂಮ್ರಾ 4 ವಿಕೆಟ್, ಮೊಹಮ್ಮದ್ ಶಮಿ 3 ವಿಕೆಟ್, ಶಾರ್ದೂಲ್ ಠಾಕೂರ್ 2 ವಿಕೆಟ್ ಹಾಗೂ ಮೊಹಮ್ಮದ್ ಸಿರಾಜ್ 1 ವಿಕೆಟ್ ಉರುಳಿಸಿ ಮಿಂಚಿದರು. ಪರಿಣಾಮ ಇಂಗ್ಲೆಂಡ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.
PublicNext
04/08/2021 10:16 pm