ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈ ಕಚ್ಚಿದರು ಧೃತಿಗೆಡ ಕುಸ್ತಿಪಟು : ಎದುರಾಳಿಯ ಬೆವರಿಳಿಸಿದ ರವಿ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಫೈನಲ್ ತಲುಪಿದ ಎರಡನೇ ಕುಸ್ತಿಪಟು ಎನಿಸಿಕೊಂಡಿರುವ ಭಾರತದ ಕುಸ್ತಿಪಟು ರವಿ ದಹಿಯಾ ಅವರು 57 ಕೆಜಿ ವಿಭಾಗದ ಸೆಮಿಫೈನಲ್ ನಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಅವರನ್ನು ಸೋಲಿಸಿದ್ದಾರೆ. ಈ ಪಂದ್ಯದ ಸಮಯದಲ್ಲಿ, ರವಿ ದಹಿಯಾ ಅವರ ಕೈಯನ್ನು ಎದುರಾಳಿ ಕುಸ್ತಿಪಟು ನೂರ್ ಇಸ್ಲಾಮ್ ಸನಾಯೆವ್ ಕಚ್ಚಿದರು. ಆದರೆ ಭಾರತೀಯ ಕುಸ್ತಿಪಟು ನೋವನ್ನು ನುಂಗಿ ಎದುರಾಳಿಯ ಭುಜವನ್ನು ಸಂಪೂರ್ಣವಾಗಿ ನೆಲಕ್ಕೆ ತಾಗಿಸಿದರು.

ರವಿ ಅವರು ಪುರುಷರ 57 ಕೆ.ಜಿ. ವಿಭಾಗದ ಫ್ರೀ ಸ್ಟ್ರೈಲ್ ಕುಸ್ತಿ ಸ್ಪರ್ಧೆಯಲ್ಲಿ ಕೊಲಂಬಿಯಾದ ಅರ್ಬಾನೊ ಟೈಗರೋಸ್ ಎದುರು 13-2 ಅಂಕಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್ ಫೈನಲ್ ಗೆ ಲಗ್ಗೆಯಿಟ್ಟಿದ್ದರು. ಬುಧವಾರ ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲಿ ರವಿಕುಮಾರ್ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆದ್ದು ಭಾರತಕ್ಕೆ ಮಗದೊಂದು ಪದಕ ಖಾತ್ರಿಪಡಿಸಿದ್ದಾರೆ.

ರವಿ ದಹಿಯಾ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಐದನೇ ಭಾರತೀಯ ಕುಸ್ತಿಪಟು.

Edited By : Nirmala Aralikatti
PublicNext

PublicNext

05/08/2021 04:44 pm

Cinque Terre

32.55 K

Cinque Terre

0

ಸಂಬಂಧಿತ ಸುದ್ದಿ