ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೊಕಿಯೊ ಒಲಂಪಿಕ್ಸ್ : ಸೆಮಿ ಫೈನಲ್ ನಲ್ಲಿ ಸೋತ ಕುಸ್ತಿಪಟು ಭಜರಂಗ್ ಪೂನಿಯಾ

ಟೋಕಿಯೊ: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಟೊಕಿಯೊ ಒಲಂಪಿಕ್ಸ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು, ಈ ಮೂಲಕ ಪದಕದ ಭರವಸೆ ಮೂಡಿಸಿದ್ದರು. ಪುರುಷರ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಬಜರಂಗ್ ಪೂನಿಯಾ ಇರಾನ್ ನ ಮೊರ್ತೆಜಾ ಗಿಯಾಸಿ ವಿರುದ್ದ ಗೆಲುವು ದಾಖಲಿಸಿದ್ದರು.

ಇಂದು ನಡೆದ ಪಂದ್ಯದಲ್ಲಿ ಅಜರ್ ಬೈಜಾನಿಯಾದ ಹಾಜಿ ಆಲಿಯಾವ್ ವಿರುದ್ಧ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಜರಂಗ್ ಪೂನಿಯಾ 5-12 ಅಂಕಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಆಕ್ರಮಣಕಾರಿಯಾಗಿ ಆಡಿದ ಹಾಜಿ ಆಲಿಯಾವ್ ಸತತ ಅಂಕಗಳನ್ನು ಗಳಿಸುತ್ತಾ ಪಂದ್ಯದಲ್ಲಿ ಹಿಡಿತ ಸಾಧಿಸಿದರು.

Edited By : Nirmala Aralikatti
PublicNext

PublicNext

06/08/2021 04:36 pm

Cinque Terre

62.06 K

Cinque Terre

0

ಸಂಬಂಧಿತ ಸುದ್ದಿ