ಟೋಕಿಯೊ: ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದೆ. ಕುಸ್ತಿಯಲ್ಲಿ ಭಾರತದ ಅಥ್ಲೀಟ್ ಬಜರಂಗ್ ಪುನಿಯಾ ಕಂಚಿನ ಪದಕ ಗೆದ್ದು ಭಾರತದ ಹೆಮ್ಮೆಯಾಗಿದ್ದಾರೆ.
ಹೌದು.. ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಂದು ನಡೆದ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ ಗೆಲುವು ದಾಖಲಿಸಿ ಕಂಚಿನ ಪದಕ ಸಾಧಿಸಿದ್ದಾರೆ.
PublicNext
07/08/2021 05:09 pm