ಟೋಕಿಯೊ: ಜಾವೆಲಿನ್ ಎಸೆತದ ಕಿಲಾಡಿ ಅಥ್ಲೀಟ್ ಎನಿಸಿಕೊಂಡಿದ್ದ ಭಾರತದ ನೀರಜ್ ಚೋಪ್ರಾ ಅವರು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ದಾಖಲೆಯ ಇತಿಹಾಸ ನಿರ್ಮಿಸಿದ್ದಾರೆ.
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ ದಾಖಲೆಯ 87.58ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದು ಅಗ್ರ ಸ್ಥಾನಿಯಾಗುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಜಾವೆಲಿನ್ ಥ್ರೋ ವಿಭಾಗದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಚಿನ್ನದ ಪದಕ ಬಂದಿದೆ.
PublicNext
07/08/2021 05:46 pm