ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಜಾವಲಿನ್ ಪಟು ನೀರಜ್ ಚೋಪ್ರಾ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ನಡುವೆ ಹರಿಯಾಣ ಸರ್ಕಾರ 6 ಕೋಟಿ ರೂ. ಹಾಗೂ ಮಹೀಂದ್ರ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಬ್ರ್ಯಾಂಡ್ ನ್ಯೂ ಎಕ್ಸ್ ಯುವಿ 700 ಕಾರ್ ನ್ನು ನೀರಜ್ ಅವರಿಗೆ ಉಡುಗೊರೆಯಾಗಿ ನೀಡುವುದಾಗಿ ಘೊಷಿಸಿದ್ದಾರೆ.
ನೀರಜ್ ಚೋಪ್ರಾ ಶನಿವಾರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಅಥ್ಲೆಟಿಕ್ ಲೋಕ ನಿಬ್ಬೆರಗಾಗುವಂತೆ ಮಾಡಿದ್ದಾರೆ. ಅಲ್ಲದೆ ಹೊಸ ದಾಖಲೆಯನ್ನು ಬರೆದಿದ್ದಾರೆ. ಹೀಗಾಗಿ ಸರ್ಕಾರಗಳು ಸೇರಿದಂತೆ ಹಲವರು ಅವರಿಗೆ ಉಡುಗೊರೆಗಳನ್ನು ಘೊಷಿಸುತ್ತಿದ್ದಾರೆ.
PublicNext
07/08/2021 10:35 pm