ಇಸ್ಲಾಮಾಬಾದ್: ಇಂಗ್ಲೆಂಡ್ ಹಾಗೂ ಭಾರತ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲಿಂಗ್ ಪ್ರದರ್ಶನವನ್ನು ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಹಾಡಿ ಹೊಗಳಿದ್ದಾರೆ.
ಈ ಬಗ್ಗೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆ ಇಂತಹ ಭಾರತೀಯ ವೇಗದ ಬೌಲಿಂಗ್ ತಂಡವನ್ನು ನೋಡಿಲ್ಲ. ಭಾರತದ ಬೌಲರ್‌ಗಳು ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಲು ಯಶಸ್ವಿಯಾದರು. ಜಸ್‌ಪ್ರೀತ್ ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದು ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿದರು. ಇತರ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು" ಎಂದರು.
PublicNext
08/08/2021 04:13 pm