ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಒಲಿಂಪಿಯನ್ ಗಳ ಬಗ್ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದರು. ಇಂದು ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪಾಲ್ಗೊಂಡು ತವರಿಗೆ ಮರಳಿರುವ ಭಾರತ ತಂಡದ ಸದಸ್ಯರಿಗೆ ಚಹಾಕೂಟ ಏರ್ಪಡಿಸಲಾಗಿತ್ತು.
ಇದೇ ವೇಳೆ ಮಾತನಾಡಿದ ಅವರು, ‘ಟೋಕಿಯೊ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ನಾನು ಅಭಿನಂದಿಸುತ್ತೇನೆ. ಭಾರತದ ಕ್ರೀಡಾಪಟುಗಳು ಈ ಬಾರಿಯ ಕೂಟದಲ್ಲಿ ಏಳು ಪದಕಗಳನ್ನು ಗೆದ್ದಿದ್ದರು. ಇದು ಒಲಿಂಪಿಕ್ಸ್ ನಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಕ್ರೀಡಾಪಟುಗಳ ಸಾಧನೆಗಳ ಬಗ್ಗೆ ಇಡೀ ದೇಶ ಹೆಮ್ಮೆಪಡುತ್ತದೆ’ ಎಂದರು. ಚಹಾಕೂಟದಲ್ಲಿ ಕ್ರೀಡಾಪಟುಗಳು ಗಣ್ಯರು ಭಾಗವಹಿಸಿದ್ದರು.
PublicNext
14/08/2021 08:31 pm