ಲಂಡನ್: ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮೈದಾನದಲ್ಲಿ ಅಷ್ಟೇ ಅಲ್ಲದೆ ಮೈದಾನದ ಹೊರಗೂ ಕೂಲ್ ಆ್ಯಂಡ್ ಕಾಮ್ ಆಗಿ ಇರುತ್ತಾರೆ. ಕ್ರಿಕೆಟ್ ಅಲ್ಲದೆ ಡಾನ್ಸ್ ವಿಚಾರವಾಗಿ ವಿರಾಟ್ ಕೊಹ್ಲಿ ಈ ಹಿಂದೆ ಸುದ್ದಿಯಾಗಿದ್ದರು. ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಪಂಜಾಬಿ ಬಾಂಗ್ರಾ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದ ವಿರಾಟ್, ಈಗ ಲಾರ್ಡ್ಸ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ವೇಳೆಯೂ ಇಂಥದ್ದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ.
ಲಾರ್ಡ್ಸ್ನ ಬಾಲ್ಕನಿಯಲ್ಲಿ ನಾಗಿನಿ ಡ್ಯಾನ್ಸ್ ಮಾಡಿ ಸಹ ಆಟಗಾರರನ್ನು ರಂಜಿಸಿದ್ದಾರೆ. ಈ ವೇಳೆ ಪಕ್ಕದಲ್ಲೇ ಇದ್ದ ಕನ್ನಡಿಗರಾದ ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್, ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್, ನಗೆಗಡಲಲ್ಲಿ ತೇಲಾಡಿದರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
PublicNext
15/08/2021 12:38 pm