ಬೆಂಗಳೂರು/ಪುಣೆ: ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಬಾರತದ ಹೆಮ್ಮೆ ನೀರಜ್ ಚೋಪ್ರಾ ತಮ್ಮ ಗುರು ಕನ್ನಡಿಗ ಕಾಶಿನಾಥ್ ನಾಯ್ಕ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಕಾಶಿನಾಥ್ ನಾಯ್ಕ್ ಅವರು ನೀರಜ್ ಚೋಪ್ರಾ ಅವರಿಗೆ 2015 ರಿಂದ ಸುಮಾರು ಮೂರು ವರ್ಷಗಳ ಕಾಲ ಪಟಿಯಾಲಾದಲ್ಲಿ ಜಾವಲಿನ್ ಎಸೆತದ ತರಬೇತಿ ನೀಡಿದ್ದರು.
ಪುಣೆಯ ಕೋರೆಗಾಂವ್ ನಲ್ಲಿರುವ ಕಾಶಿನಾಥ್ ನಾಯ್ಕ್ ಅವರ ಮನೆಗೆ ನೀರಜ್ ಚೋಪ್ರಾ ಆಗಮಿಸಿದ್ದರು. ಈ ವೇಳೆ ಕಾಶಿನಾಥ್ ನಾಯ್ಕ್ ಅವರ ಪತ್ನಿ ಚೈತ್ರಾ ಅವರು ಆರತಿ ಬೆಳಗಿ ಮನೆಗೆ ಸ್ವಾಗತಿಸಿದರು. ಸುಮಾರು ಒಂದು ಗಂಟೆಗಳ ಕಾಲ ಗುರುಶಿಷ್ಯರು ಒಲಿಂಪಿಕ್ಸ್ ಕ್ರೀಡಾಕೂಟದ ಬಗ್ಗೆ ಮಾತುಕತೆ ನಡೆಸಿದರು.
PublicNext
25/08/2021 11:48 am