ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರು ನಮ್ಮ ಪಾಲಿನ ಹೀರೋ ಆಗಿದ್ದಾರೆ. ಹೀಗಾಗಿ ಅನೇಕ ಕ್ರೀಡಾ ಕಾರ್ಯಕ್ರಮಗಳಿಗೆ ಅವರನ್ನು ಆಹ್ವಾನಿಸಲಾಗುತ್ತಿದೆ. ಹೀಗಾಗಿ ಅಭ್ಯಾಸಕ್ಕೆ ಸಮಯ ನೀಡಲು ಸಾಧ್ಯವಾಗದೆ ಚಿನ್ನದ ಹುಡುಗ ಕಳವಳ ವ್ಯಕ್ತಪಡಿಸಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನೀರಜ್ ಚೋಪ್ರಾ, "ನಿರಂತರ ಕಾರ್ಯಕ್ರಮಗಳಿಂದ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಭಾರತದಲ್ಲಿ ಬದಲಾಗಬೇಕು. ಒಂದು ವೇಳೆ ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ನಡೆಯುವ ಕ್ರೀಡಾಕೂಟಕ್ಕೆ ನಾನು ಫಿಟ್ ಆಗಿರಲು ಕಷ್ಟವಾಗುತ್ತದೆ" ಎಂದು ಹೇಳಿದ್ದಾರೆ.
PublicNext
25/08/2021 02:03 pm