ಲೀಡ್ಸ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಲೀಡ್ಸ್‌ನಲ್ಲಿ ಬುಧವಾರ ನಡೆದ ಮೂರನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 7 ರನ್ (17 ಎಸೆತ) ಗಳಿಸಿ ವಿಕೆಟ್ ಒಪ್ಪಿಸಿದರು.
32ರ ಹರೆಯದ ವಿರಾಟ್ ಕಳೆದ ಅಂತರರಾಷ್ಟ್ರೀಯ ಕ್ರಿಕೆಟ್‌ನ 50 ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸುವಲ್ಲಿ ವಿಫಲರಾಗಿದ್ದಾರೆ. ಅಂದರೆ 642 ದಿನಗಳಿಂದ ಈವರೆಗೂ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಒಂದೇ ಒಂದು ಶತಕ ಸಿಡಿಸಿಲ್ಲ. ಅವರು ಕೊನೆಯದಾಗಿ ನವೆಂಬರ್ 2019ರಲ್ಲಿ ಭಾರತದ ಮೊದಲ ಡೇ ಆ್ಯಂಡ್ ನೈಟ್ ಟೆಸ್ಟ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ 136 ರನ್ ಗಳಿಸಿದ್ದರು.
PublicNext
26/08/2021 07:49 am