ಟೋಕಿಯೋ: ಪ್ಯಾರಾಲಿಂಪಿಕ್ಸ್ ವನಿತಾ ವಿಭಾಗದ ಟೇಬಲ್ ಟೆನ್ನಿಸ್ನಲ್ಲಿ ಭಾರತದ ಭವಿನಾಬೆನ್ ಪಟೇಲ್ ಬೆಳ್ಳಿ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಚೀನಾದ ಯಿಂಗ್ ಜ್ಯೂ ಅವರು ಭವಿನಾಬೆನ್ ಪಟೇಲ್ ವಿರುದ್ಧ 7-11, 5-11, 6-11 ನೇರ ಸೆಟ್‌ಗಳಿಂದ ಜಯಗಳಿಸಿದರು. ಫೈನಲ್ ಸೋತರೂ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾರತದ ಪರ ಮೊದಲ ಪದಕ ಪಡೆದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
PublicNext
29/08/2021 10:02 am