ನವದೆಹಲಿ: ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದಿರುವ ಭಾರತದ ಸುಮಿತ್ ಅಂತಿಲ್ ಅವರಿಗೆ ಹರಿಯಾಣ ಸರ್ಕಾರವು 6 ಕೋಟಿ ರೂ. ಬಹುಮಾನ ಮತ್ತು ಸರ್ಕಾರಿ ನೌಕರಿ ನೀಡುವುದಾಗಿ ಘೋಷಿಸಿದೆ.
ಜೊತೆಗೆ ಪುರುಷರ 'ಎಫ್ 56' ವಿಭಾಗದ ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದಿರುವ ಯೋಗೇಶ್ ಕಥೂನಿಯಾ ಅವರಿಗೆ 4 ಕೋಟಿ ರೂ. ಬಹುಮಾನ ಮತ್ತು ಸರ್ಕಾರಿ ನೌಕರಿ ನೀಡುವುದಾಗಿ ಹರಿಯಾಣ ಸರ್ಕಾರ ತಿಳಿಸಿದೆ.
ಫೈನಲ್ ಸ್ಪರ್ಧೆಯಲ್ಲಿ ಮೊದಲ ಪ್ರಯತ್ನದಲ್ಲೇ 66.95 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಸುಮಿತ್ ಅಂತಿಲ್, ಬಳಿಕ ಎರಡನೇ ಪ್ರಯತ್ನದಲ್ಲಿ 68.08 ಮೀಟರ್ ತಮ್ಮದೇ ದಾಖಲೆಯನ್ನು ಮತ್ತಷ್ಟು ಉತ್ತಮ ಪಡಿಸಿಕೊಂಡರು. ಇನ್ನು 5ನೇ ಪ್ರಯತ್ನದಲ್ಲಿ 68.55 ಮೀಟರ್ ದೂರ ಎಸೆದು ಮೂರನೇ ಬಾರಿಗೆ ವಿಶ್ವದಾಖಲೆ ನಿರ್ಮಿಸಿ ಚಿನ್ನದ ಪದಕ ಖಚಿತಪಡಿಸಿಕೊಂಡರು.
ಕೆಲವು ದಿನಗಳ ಹಿಂದಷ್ಟೇ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಇದೀಗ ಸುಮಿತ್ ಟೋಕಿಯೋ ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಜಯಿಸಿದ ಸಾಧನೆ ಮಾಡಿದ್ದಾರೆ.
PublicNext
30/08/2021 09:24 pm