ಇಂಗ್ಲೆಂಡ್ ವಿರುದ್ಧ ಓವಲ್ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಭಾರತ ತಂಡಕ್ಕೆ ಸೇರಿಕೊಂಡಿದ್ದಾರೆ ಎಂದು ಬಿಸಿಸಿಐ ಬುಧವಾರ ಖಚಿತಪಡಿಸಿದೆ.
ಸ್ಟ್ಯಾಂಡ್ಬೈ ಆಟಗಾರನಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ, ಇದೀಗ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದೇ ವರ್ಷ ಮಾರ್ಚ್ ತಿಂಗಳಲ್ಲಿ ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಪ್ರಸಿದ್ಧ್ ಕೃಷ್ಣ, ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್, ಈ ಹಿಂದೆಯೇ ಪ್ರಸಿದ್ಧ್ ಕೃಷ್ಣ ಅವರನ್ನು ಟೆಸ್ಟ್ ತಂಡದಲ್ಲಿ ಆಡಿಸುವಂತೆ ಸಲಹೆ ನೀಡಿದ್ದರು.
ಗುರುವಾರದಿಂದ ಓವಲ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಎರಡು ತಂಡಗಳು ತಲಾ ಒಂದು ಟೆಸ್ಟ್ ಪಂದ್ಯ ಗೆದ್ದು 1-1ರಲ್ಲಿ ಸರಣಿ ಸಮಬಲ ಸಾಧಿಸಿವೆ.
PublicNext
01/09/2021 04:51 pm