ಓವಲ್: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯ ತೋರಿದೆ. ಪರಿಣಾಮ ನಾಯಕ ವಿರಾಟ್ ಕೊಹ್ಲಿ ಹಾಗೂ ಶಾರ್ದೂಲ್ ಠಾಕೂರ್ ಅರ್ಧಶತಕದಿಂದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 191 ರನ್ ಗಳಿಸಿ ಆಲೌಟ್ ಆಗಿದೆ.
ಲಂಡನ್‌ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಇಂದು ಆರಂಭವಾಗಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತನ್ನ ಬೌಲಿಂಗ್ ಆಯ್ಕೆಯನ್ನು ಸಮರ್ಥಿಸಿಕೊಂಡಿದೆ. ಇಂಗ್ಲೆಂಡ್ ತಂಡದ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ 61.3 ಓವರ್‌ಗಳಲ್ಲಿ 191 ರನ್ ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. ತಂಡದ ಪರ ವಿರಾಟ್ ಕೊಹ್ಲಿ 50 ರನ್ ಹಾಗೂ ಶಾರ್ದೂಲ್ ಠಾಕೂರ್ 57 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಉಳಿದಂತೆ ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಚೇತೇಶ್ವರ ಪೂಜಾರ, ಅಜಿಂಕೆ ರಹಾನೆ ಸೇರಿದಂತೆ ಯಾವುದೇ ಆಟಗಾರರು ಇಪ್ಪತ್ತು ರನ್‌ಗಳ ಗಡಿ ದಾಟುವಲ್ಲಿ ವಿಫಲವಾದರು.
ಇಂಗ್ಲೆಂಡ್ ಪರ ಕ್ರಿಸ್ ವೋಕ್ಸ್ 4 ವಿಕೆಟ್, ಒಲ್ಲಿ ರಾಬಿನ್ಸನ್ 3 ವಿಕೆಟ್ ಕಿತ್ತು ಮಿಂಚಿದರೆ, ಕ್ರೇಗ್ ಓವರ್‌ಟನ್ ಹಾಗೂ ಜೇಮ್ಸ್ ಆಂಡರ್ಸನ್ ತಲಾ 1 ವಿಕೆಟ್ ಪಡೆದುಕೊಂಡರು.
PublicNext
02/09/2021 10:00 pm