ಓವಲ್: ಇಂಗ್ಲೆಂಡ್ ವಿರುದ್ಧದ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಮೋಘ ಶತಕ ದಾಖಲಿಸಿದ್ದಾರೆ.
ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಾಲ್ಕನೇ ಪಂದ್ಯವಿದು. ಮೋಯಿನ್ ಅಲಿ ಎಸೆತದಲ್ಲಿ ಸಿಕ್ಸರ್ ಹೊಡೆಯುವ ಮೂಲಕ ರೋಹಿತ್ ಶರ್ಮಾ ಶತಕ ದಾಖಲಿಸಿದರು. 2013ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರೋಹಿತ್, ವಿದೇಶದಲ್ಲಿ ಗಳಿಸಿದ ಮೊದಲ ಶತಕ ಇದಾಗಿದೆ. ತವರಿನ ಟೆಸ್ಟ್ ಪಂದ್ಯಗಳಲ್ಲಿ ಅವರು 7 ಶತಕ ದಾಖಲಿಸಿದ್ದಾರೆ.
ಮೊದಲ ಇನಿಂಗ್ಸ್‌ನಲ್ಲಿ 99 ರನ್‌ಗಳ ಹಿನ್ನಡೆ ಅನುಭವಿಸಿದ್ದ ಭಾರತಕ್ಕೆ ಚೇತರಿಕೆ ನೀಡಿದ ರೋಹಿತ್, ಕೆ.ಎಲ್. ರಾಹುಲ್ ಜೊತೆಗೂಡಿ 83 ರನ್‌ಗಳ ಜೊತೆಯಾಟ ನೀಡಿದರು. ಕೆ.ಎಲ್.ರಾಹುಲ್ 46 ರನ್ ಗಳಿಸಿ ನಿರ್ಗಮಿಸಿದ ಬಳಿಕ ಚೆತೇಶ್ವರ್ ಪೂಜಾರ ಜೊತೆ ಇನಿಂಗ್ಸ್ ಕಟ್ಟುತ್ತಿದ್ದಾರೆ. ಮೊದಲ ಇನಿಂಗ್ಸ್‌ನ ಹಿನ್ನಡೆಯಿಂದ ಹೊರಬಂದಿರುವ ಭಾರತ ಲೀಡ್ ಪಡೆದಿದೆ.
ಚಹಾ ವಿರಾಮದ ವೇಳೆಗೆ ಭಾರತ 1 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿದ್ದು, ಎರಡನೇ ಇನಿಂಗ್ಸ್‌ನಲ್ಲಿ 100 ರನ್ ಮುನ್ನಡೆ ಪಡೆದಿದೆ.
PublicNext
04/09/2021 08:46 pm