ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿನ್​​, ದ್ರಾವಿಡ್​​ ಬಳಿಕ ಇಂಗ್ಲೆಂಡ್‌ನಲ್ಲಿ ಹೊಸ ಮೈಲಿಗಲ್ಲು ನೆಟ್ಟ ವಿರಾಟ್ ಕೊಹ್ಲಿ

ಲಂಡನ್​: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ದಿನದಾಟ ಇಂದು ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್‌ ನೆಲದಲ್ಲಿ 1,000 ಟೆಸ್ಟ್ ರನ್ ಪೂರೈಸಿದ ದೇಶದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಾಲ್ಕನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟದಲ್ಲಿ 4 ರನ್​​ಗಳಿಸುವ ಮೂಲಕ ಈ ಸಾಧನೆ ಮಾಡಿದರು. ಭಾರತ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ನಂತರ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಲ್ಲಿ 1,000ಕ್ಕಿಂತ ಹೆಚ್ಚು ಟೆಸ್ಟ್ ರನ್ ಗಳಿಸಿದ ಮೂರನೇ ಭಾರತೀಯ ಆಟಗಾರ ಎಂಬ ಸಾಧನೆ ಮಾಡಿದ್ದಾರೆ.

ಸಚಿನ್ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಲ್ಲಿ ಕ್ರಮವಾಗಿ 1,809 ಮತ್ತು 1,575 ರನ್ ಗಳಿಸಿದ್ದಾರೆ. ದ್ರಾವಿಡ್ ಆಸ್ಟ್ರೇಲಿಯಾದಲ್ಲಿ 1,143 ಮತ್ತು ಇಂಗ್ಲೆಂಡ್​​ನಲ್ಲಿ 1,376 ರನ್ ಕಲೆ ಹಾಕಿದ್ದಾರೆ. ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ಇದುವರೆಗೆ 1,352 ರನ್ ಗಳಿಸಿದ್ದಾರೆ. ಉಳಿದಂತೆ ವಿರಾಟ್ ಕೊಹ್ಲಿ ಟೆಸ್ಟ್​​ ಕ್ರಿಕೆಟ್​​ನಲ್ಲಿ ಆಸ್ಟ್ರೇಲಿಯಾ ವಿರುದ್ಧ (1,682 ರನ್), ಇಂಗ್ಲೆಂಡ್ (1,960 ರನ್), ದಕ್ಷಿಣ ಆಫ್ರಿಕಾ (1,075 ರನ್) ಮತ್ತು ಶ್ರೀಲಂಕಾ (1,004 ರನ್) ಗಳಿಸಿದ ಸಾಧನೆ ಮಾಡಿದ್ದಾರೆ.

Edited By : Vijay Kumar
PublicNext

PublicNext

05/09/2021 08:01 pm

Cinque Terre

41.99 K

Cinque Terre

0

ಸಂಬಂಧಿತ ಸುದ್ದಿ