ಲಂಡನ್: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 100 ವಿಕೆಟ್‌ಗಳನ್ನು ಪಡೆದ ಭಾರತೀಯ ವೇಗದ ಬೌಲರ್ ಎಂಬ ಹೆಗ್ಗಳಿಕೆಯೊಂದಿಗೆ ಟೀಂ ಇಂಡಿಯಾ ತಾರೆ ಜಸ್‌ಪ್ರೀತ್ ಬುಮ್ರಾ ಇತಿಹಾಸದ ಪುಟ ಸೇರಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯ ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಈ ವಿಶೇಷ ದಾಖಲೆ ತಮ್ಮದಾಗಿಸಿಕೊಂಡರು. ಈ ಮೂಲಕ ಭಾರತ ತಂಡದ ಮಾಜಿ ನಾಯಕ ಮತ್ತು ಆಲ್‌ರೌಂಡರ್ ಕಪಿಲ್ ದೇವ್ ಹೆಸರಿನಲ್ಲಿದ್ದ ದೀರ್ಘಕಾಲದ ದಾಖಲೆಯನ್ನು ಅಳಿಸಿಹಾಕಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆಯಲು ಕಪಿಲ್ ದೇವ್ 25 ಪಂದ್ಯಗಳನ್ನು ತೆಗೆದುಕೊಂಡರೆ, 27 ವರ್ಷದ ಜಸ್‌ಪ್ರೀತ್ ಬುಮ್ರಾ ತಮ್ಮ 24ನೇ ಪಂದ್ಯದಲ್ಲಿ ಈ ಸಾಧನೆ ಮೆರೆದಿದ್ದಾರೆ. ನಾಲ್ಕನೇ ಟೆಸ್ಟ್ ಪಂದ್ಯದ ಐದನೇ ದಿನದಾಟದಲ್ಲಿ ಓಲ್ಲೀ ಪೋಪ್ (2) ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಬುಮ್ರಾ ಟೆಸ್ಟ್ ವಿಕೆಟ್‌ಗಳ ಶತಕ ಬಾರಿಸಿದರು.
PublicNext
07/09/2021 08:17 am