ಓವಲ್: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಅಮೋಘ ಶತಕವನ್ನು ಬಾರಿಸಿ ಮಿಂಚಿದ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದ ನಂತರ ಪಂದ್ಯದ ಕುರಿತು ಮಾತನಾಡಿದ ರೋಹಿತ್ ಶರ್ಮಾ ಈ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆಯಲು ನನಗಿಂತ ಶಾರ್ದೂಲ್ ಠಾಕೂರ್ ಹೆಚ್ಚು ಅರ್ಹ ಎಂದು ಹೇಳಿಕೆ ನೀಡಿದ್ದಾರೆ.
ಶಾರ್ದೂಲ್ ಠಾಕೂರ್ ಮ್ಯಾಚ್ ವಿನ್ನಿಂಗ್ ಆಟವನ್ನು ಆಡಿದ್ದಾರೆ. ತಂಡ ಕಷ್ಟದಲ್ಲಿದ್ದ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿದ ಶಾರ್ದೂಲ್ ಠಾಕೂರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಅರ್ಹನಾದ ಆಟಗಾರ. ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೇ 100 ರನ್ ದಾಟಿದ ಸಂದರ್ಭದಲ್ಲಿ ಶಾರ್ದೂಲ್ ವಿಕೆಟ್ ಪಡೆದರು ಹಾಗೂ ಸ್ಫೋಟಕ ಆಟಗಾರ ಜೋ ರೂಟ್ ವಿಕೆಟ್‍ನ್ನೂ ಕೂಡ ಪಡೆದ ಅವರು ಮೊದಲ ಮತ್ತು ಎರಡನೇ ಇನ್ನಿಂಗ್ಸ್ ಎರಡರಲ್ಲೂ ಅರ್ಧಶತಕ ಬಾರಿಸಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಮಿಂಚಿದರು ಎಂದು ರೋಹಿತ್ ಶರ್ಮಾ ಶಾರ್ದೂಲ್ ಠಾಕೂರ್ ಅವರ ಆಟವನ್ನು ಕೊಂಡಾಡಿದ್ದಾರೆ.
PublicNext
07/09/2021 01:17 pm