ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾಗೆ ಎಂ.ಎಸ್‌.ಧೋನಿ ಮೆಂಟರ್

ಮುಂಬೈ: ಟಿ20 ವಿಶ್ವಕಪ್ ಕ್ರಿಕೆಟ್‌ಗೆ ಬಿಸಿಸಿಐ ತಂಡವನ್ನು ಆಯ್ಕೆ ಮಾಡಿದ್ದು, ಇದರ ಜೊತೆ ತಂಡಕ್ಕೆ ಮಾರ್ಗದರ್ಶನ ನೀಡಲು ಮಾಜಿ ನಾಯಕ ಎಂ.ಎಸ್ ಧೋನಿ ಅವರನ್ನು ನೇಮಕ ಮಾಡಿದೆ.

ಬಿಸಿಸಿಐ ಆಯೋಜನೆ ಮಾಡುತ್ತಿರುವ ಈ ಬಾರಿಯ ಟಿ20 ವಿಶ್ವಕಪ್ ಭಾರತದಲ್ಲಿ ನಡೆಯಬೇಕಾಗಿತ್ತು. ಆದರೆ ಭಾರತದಲ್ಲಿ ಕೊರೊನಾ ವೈರಸ್‌ ಆತಂಕ ಇರುವ ಕಾರಣ ಯುಎಇ ಹಾಗೂ ಒಮಾನ್‌ಗೆ ವಿಶ್ವಕಪ್‌ ಪಂದ್ಯಗಳನ್ನು ಸ್ಥಾಳಾಂತರ ಮಾಡಲಾಗಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ಈ ಟಿ20 ವಿಶ್ವಕಪ್‌ನ ಪಂದ್ಯಗಳು ನಡೆಯಲಿದೆ.

ತಂಡ ಹೀಗಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.

Edited By : Vijay Kumar
PublicNext

PublicNext

09/09/2021 07:36 am

Cinque Terre

28.29 K

Cinque Terre

1

ಸಂಬಂಧಿತ ಸುದ್ದಿ