ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧೋನಿ- ಶಾಸ್ತ್ರಿ ಮಧ್ಯೆ ಜಗಳವಾಗದಿರಲಿ: ಗವಾಸ್ಕರ್ ಪ್ರಾರ್ಥನೆ

ನವದೆಹಲಿ: ಟಿ20 ವಿಶ್ವಕಪ್ ಕ್ರಿಕೆಟ್‌ಗೆ ಬಿಸಿಸಿಐ ತಂಡವನ್ನು ಆಯ್ಕೆ ಮಾಡಿದ್ದು, ಇದರ ಜೊತೆ ತಂಡಕ್ಕೆ ಮಾರ್ಗದರ್ಶನ ನೀಡಲು ಮಾಜಿ ನಾಯಕ ಎಂ.ಎಸ್ ಧೋನಿ ಅವರನ್ನು ನೇಮಕ ಮಾಡಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಭಾರತದ ಮಾಜಿ ಕ್ರಿಕೆಟರ್ ಸುನಿಲ್ ಗವಾಸ್ಕರ್, "ಎಂ.ಎಸ್. ಧೋನಿಯ ನೇಮಕಾತಿ ಭಾರತಕ್ಕೆ ಒಳ್ಳೆಯ ಸುದ್ದಿಯಾಗಿದೆ. ಆದರೆ ಧೋನಿ ಮತ್ತು ರವಿಶಾಸ್ತ್ರಿ ನಡುವೆ ಯಾವುದೇ ಘರ್ಷಣೆಯಾಗದಂತೆ ನಾನು ಪ್ರಾರ್ಥಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.

"ತಂತ್ರಗಳು ಮತ್ತು ಆಟಗಾರರ ಆಯ್ಕೆಯ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೆ ತಂಡದ ಮೇಲೆ ಪರಿಣಾಮ ಬೀರಬಹುದು" ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Edited By : Vijay Kumar
PublicNext

PublicNext

09/09/2021 01:29 pm

Cinque Terre

51.91 K

Cinque Terre

3