ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ತಮ್ಮ ಪೋಷಕರನ್ನು ಮೊಟ್ಟ ಮೊದಲ ಬಾರಿ ವಿಮಾನದಲ್ಲಿ ಕರೆದೊಯ್ದಿದ್ದಾರೆ. ಈ ಮೂಲಕ ತಮ್ಮ ಬಹುದಿನಗಳ ಕನಸನ್ನು ಇಂದು ನನಸು ಮಾಡಿಕೊಂಡಿದ್ದಾರೆ.
ಈ ಸಂತಸದ ಕ್ಷಣವನ್ನು ಟ್ವೀಟ್ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. "ತನ್ನ ಪೋಷಕರನ್ನು ವಿಮಾನದಲ್ಲಿ ಕರೆದೊಯ್ಯುವ ಸಣ್ಣ ಕನಸು ಇಂದು(ಶನಿವಾರ) ನನಸಾಗಿದೆ. ಎಲ್ಲರ ಪ್ರಾರ್ಥನೆ ಮತ್ತು ಆಶೀರ್ವಾದಕ್ಕೆ ಯಾವಾಗಲೂ ಕೃತಜ್ಞರಾಗಿರುತ್ತೇನೆ" ಎಂದು ನೀರಜ್ ಚೋಪ್ರಾ ಟ್ವೀಟ್ ಮಾಡಿದ್ದಾರೆ.
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಬಳಿಕ ನೀರಜ್ ಚೋಪ್ರಾ 2021ರ ಆವೃತ್ತಿಯ ಸ್ಪರ್ಧೆಯಿಂದ ವಿರಾಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಅಷ್ಟೇ ಅಲ್ಲದೆ 2022ರ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಡದಲ್ಲಿ ಭಾಗವಹಿಸುವುದಾಗಿ ಅವರು ಮಾಹಿತಿ ನೀಡಿದ್ದರು.
PublicNext
11/09/2021 04:28 pm