ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಮ್ಮ ಸಾರ್ವಕಾಲಿಕ ಶ್ರೇಷ್ಠ IPL XI ತಂಡ ಹೆಸರಿಸಿದ ಶಕೀಬ್: ಧೋನಿ ಕ್ಯಾಪ್ಟನ್, ಕನ್ನಡಿಗ ಕೆಎಲ್‌ಗೂ ಸ್ಥಾನ

ದುಬೈ: ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಐಪಿಎಲ್ 14ನೇ ಆವೃತ್ತಿಯ ಎರಡನೇ ಇನ್ನಿಂಗ್ಸ್‌ ಪಂದ್ಯಗಳ ಆರಂಭಕ್ಕೆ ಈಗ ಕ್ಷಣಗಣನೆ ಆರಂಭವಾಗಿದೆ. ಎಲ್ಲಾ ತಂಡಗಳ ಆಟಗಾರರು ಕೂಡ ಈಗ ದುಬೈ ತಲುಪಿದ್ದು, ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ತಮ್ಮ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ಆಡುವ ಬಳಗವನ್ನು ಹೆಸರಿಸಿದ್ದಾರೆ.

ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಶಕೀಬ್, ತಮ್ಮ ಶ್ರೇಷ್ಠ ತಂಡವನ್ನು ಹೆಸರಿಸಿದ್ದಾರೆ. ಈ ತಂಡದಲ್ಲಿ ಮೂವರು ವಿದೇಶಿ ಆಟಗಾರರಿದ್ದು, 8 ಮಂದಿ ಭಾರತೀಯ ಆಟಗಾರರಿರುವುದು ವಿಶೇಷ. ಲಸಿತ್ ಮಾಲಿಂಗ ಹೊರತುಪಡಿಸಿದರೆ ಪ್ರಸಕ್ತ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿರುವ ಆಟಗಾರರೇ ಈ ತಂಡದಲ್ಲಿದ್ದಾರೆ.

ಮುಂಬೈ ಇಂಡಿಯನ್ಸ್‌ನ ರೋಹಿತ್ ಶರ್ಮಾ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ಡೇವಿಡ್ ವಾರ್ನರ್‌ರನ್ನು ಆರಂಭಿಕರಾಗಿ ಶಕೀಬ್ ಆರಿಸಿದ್ದು, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಎಂಎಸ್ ಧೋನಿ ಮತ್ತು ಕೆಎಲ್ ರಾಹುಲ್ ಅವರನ್ನು ಈ ತಂಡದ ಮಧ್ಯಮ ಕ್ರಮಾಂಕದ ಆಟಗಾರರನ್ನಾಗಿ ಆಯ್ಕೆ ಮಾಡಿದ್ದಾರೆ. ಸಿಎಸ್‌ಕೆ ನಾಯಕ ಎಂಎಸ್ ಧೋನಿ ತಂಡದ ನಾಯಕ ಮತ್ತು ವಿಕೆಟ್ ಕೀಪರ್ ಎಂದು ಹೆಸರಿಸಿದ್ದಾರೆ ಶಕೀಬ್ ಅಲ್ ಹಸನ್.

ಶಕೀಬ್ ಅಲ್ ಹಸನ್ ಹೆಸರಿಸಿದ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ XI: ರೋಹಿತ್ ಶರ್ಮಾ, ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ಕೆಎಲ್ ರಾಹುಲ್, ಬೆನ್ ಸ್ಟೋಕ್ಸ್, ರವೀಂದ್ರ ಜಡೇಜಾ, ಲಸಿತ್ ಮಾಲಿಂಗ, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್

Edited By : Vijay Kumar
PublicNext

PublicNext

14/09/2021 04:29 pm

Cinque Terre

30.73 K

Cinque Terre

0

ಸಂಬಂಧಿತ ಸುದ್ದಿ