ನವದೆಹಲಿ: ಮುಂಬರುವ ಅಕ್ಟೋಬರ್- ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಬಳಿಕ ಭಾರತ ಟಿ20 ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿಯುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಟಿ20 ತಂಡದ ಉಪ ನಾಯಕ ಯಾರಾಗ್ತಾರೆ ಎನ್ನುವ ಚರ್ಚೆ ಶುರುವಾಗಿದೆ.
ಪಂಜಾಬ್ ಕಿಂಗ್ಸ್ ನಾಯಕ, ಕನ್ನಡಿಗ ಕೆಎಲ್ ರಾಹುಲ್, ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮತ್ತು ಮುಂಬೈ ಇಂಡಿಯನ್ಸ್ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ನಂತರ ಭಾರತದ ಟಿ20 ಉಪನಾಯಕ ಸ್ಥಾನದ ಸ್ಪರ್ಧಿಗಳು ಎಂದು ವರದಿಯಾಗಿದೆ. "ಪಂತ್ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಆದರೆ ಕೆ.ಎಲ್.ರಾಹುಲ್ ಐಪಿಎಲ್‌ನ ಪಂಜಾಬ್ ತಂಡದ ಕ್ಯಾಪ್ಟನ್ ಹಿನ್ನೆಲೆಯಲ್ಲಿ ಅವರನ್ನು ಈ ಪಟ್ಟಿಯಿಂದ ಕೈಬಿಡುವಂತಿಲ್ಲ. ಇತ್ತ ಜಸ್‌ಪ್ರೀತ್ ಬುಮ್ರಾ ಅವರ ಹೆಸರು ಕೂಡ ಕೇಳಿಬರುತ್ತಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
PublicNext
17/09/2021 02:56 pm